
ಹೊಸದಿಲ್ಲಿ, ಫೆ. 27: ದಿಲ್ಲಿಯಲ್ಲಿ ರವಿವಾರ ಸಂಜೆ ಆರಂಭಗೊಂಡ ಹಿಂಸಾಚಾರವನ್ನು ನಿಯಂತ್ರಿಸಲು ಅಸಮರ್ಥರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹುದ್ದೆಯಿಂದ ಕೂಡಲೇ ವಜಾಗೊಳಿಸುವಂತೆ ಕಾಂಗ್ರೆಸ್ ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಗ್ರಹಿಸಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಪಕ್ಷದ ನಿಯೋಗ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಜ್ಞಾಪನಾ ಪತ್ರವನ್ನು ಸಲ್ಲಿಸಿತು. ‘‘ನಾಗರಿಕರ ಜೀವ, ಸ್ವಾತಂತ್ರ್ಯ ಹಾಗೂ ಸೊತ್ತಿನ ಸಂರಕ್ಷಣೆಯ ಖಾತರಿ ನೀಡಬೇಕೆಂದು ನಾವು ನಿಮ್ಮನ್ನು ಆಗ್ರಹಿಸುತ್ತೇವೆ’’ ಎಂದು ಸೋನಿಯಾ ಗಾಂಧಿ ಅವರು ರಾಷ್ಟ್ರಪತಿ ಭವನದಿಂದ ಹಿಂದಿರುಗಿದ ಬಳಿಕ ತಿಳಿಸಿದರು.
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.