
ಬೆಂಗಳೂರು: ಸಾಂಕ್ರಾಮಿಕ ರೋಗದಿಂದ ಎಲ್ಲಾ ರಂಗಕ್ಕೂ ಹೊಡೆತ ಬಿದ್ದಿದ್ದು, ೨೦೨೦ ಶೈಕ್ಷಣಿಕ ವರ್ಷವನ್ನು ಕಡಿಮೆಗೊಳಿಸಲಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮಂಡಳಿ ಶಾಲೆಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡಲಾಗಿದೆ. ಹೊಸ ಪಠ್ಯಕ್ರಮವನ್ನು ಸೋಮವಾರದೊಳಗೆ ಕರ್ನಾಟಕ ಟೆಕ್ಸ್ಟ್ ಬುಕ್ ಸೊಸೈಟಿ (ಕೆಟಿಬಿಎಸ್) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು.1-10 ತರಗತಿಗಳಿಗೆ 140-120 ಕೆಲಸದ ದಿನಗಳಿಗೆ ಹೊಂದಿಕೊಳ್ಳಲು ಪಠ್ಯಕ್ರಮವನ್ನು ಕಡಿಮೆ ಮಾಡಲಾಗಿದೆ.
"ಪರಿಷ್ಕೃತ ಪಠ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಚಿವರಿಗೆ ಕಳುಹಿಸಲಾಗಿದೆ ಮತ್ತು ಅನುಮೋದನೆಗಳನ್ನು ಸ್ವೀಕರಿಸಲಾಗಿದೆ" ಎಂದು ಕೆಟಿಬಿಎಸ್ ವ್ಯವಸ್ಥಾಪಕ ನಿರ್ದೇಶಕ ಮಡೆಗೌಡ ಹೇಳಿದರು. ಸಾಮಾನ್ಯವಾಗಿ ಶಾಲಾ ವರ್ಷದಲ್ಲಿ 210-220 ಕೆಲಸದ ದಿನಗಳಿತ್ತು.
'ನೇರ ನ್ಯೂಸ್' ನಿಮಗೆ ಆಪ್ತವೇ? ನಮ್ಮ ಸುದ್ಧಿಗಳು ಎಲ್ಲರಿಗೂ ತಲುಪಬೇಕೆಂದು ಬಯಸುವಿರಾ? ಹಾಗಾದರೇ ಈಗಲೇ ಇಲ್ಲಿರುವ ಶೇರ್ ಬಟನ್ ಕ್ಲಿಕ್ ಮಾಡಿ ನಮಗೆ ಪ್ರೋತ್ಸಾಹಿಸಿ.
ಇದನ್ನೂ ಓದಿ :
English Summary: । NeraNews.com is a leading daily news website, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.