
ಬೆಂಗಳೂರು : ಕನ್ನಡದ ಪ್ರಖ್ಯಾತ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ರಾಮು ಇಂದು ಬೆಂಗಳೂರಲ್ಲಿ ಕೊರೊನಾ ರೋಗದ ಕಾರಣದಿಂದ ಮರಣಹೊಂದಿದರು. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಮು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ರಾಮು ಅವರಿಗೆ ಕಳೆದವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಲೇ ಇದ್ದರು. ಆದರೆ, ಚಿಕಿತ್ಸೆ ಫಲಿಸಲಿಲ್ಲ. ಹೀಗಾಗಿ, ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮಲ್ಲ, ಎಕೆ ೪೭, ಕಳಸಿಪಾಳ್ಯ, ಲಾಕಪ್ ಡೆತ್, ಅರ್ಜುನ್ ಗೌಡ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ರಾಮು, ಕೋಟಿರಾಮು ಎಂದೇ ಪ್ರಸಿದ್ದಿಯಾಗಿದ್ದರು.